ವಿಮೋಚನಕಾಂಡ 11:9

ಆದರೆ ಕರ್ತನು ಮೋಶೆಗೆ--ನನ್ನ ಅದ್ಭುತಗಳು ಐಗುಪ್ತದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 11

7ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್‌ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.

8ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.

9ಆದರೆ ಕರ್ತನು ಮೋಶೆಗೆ--ನನ್ನ ಅದ್ಭುತಗಳು ಐಗುಪ್ತದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ ಅಂದನು.

10ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.

ವಿಮೋಚನಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी