ಯೆಹೋಶುವ 10:33

ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 10

31ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು.

32ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು.

33ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.

34ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಲಾಕೀಷಿನಿಂದ ಎಗ್ಲೋನಿಗೆ ಹೊರಟು ಅದಕ್ಕೆದುರಾಗಿ ಪಾಳೆಯಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ

35ಅದೇ ದಿನದಲ್ಲಿ ಅದನ್ನು ಹಿಡಿದು ಅದನ್ನು ಕತ್ತಿಯಿಂದ ಹೊಡೆದರು. ಅವನು ಲಾಕೀಷಿಗೆ ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿ ಅದೇ ದಿನದಲ್ಲಿ ಅದರಲ್ಲಿರುವ ಸಕಲ ಪ್ರಾಣಗಳನ್ನು ಸಂಪೂರ್ಣವಾಗಿ ನಾಶಮಾಡಿದನು.

ಯೆಹೋಶುವ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी