ವಿಮೋಚನಕಾಂಡ 12:31

ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್‌ ಮಕ್ಕಳೂ ಹೋಗಿಬಿಡಿರಿ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 12

29ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.

30ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.

31ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್‌ ಮಕ್ಕಳೂ ಹೋಗಿಬಿಡಿರಿ.

32ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.

33ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.

ವಿಮೋಚನಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी