ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
3ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
5ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
7ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ