ಎಸ್ತೇರಳು 4:6

ಹಾಗೆಯೇ ಹತಾಕನು ಅರಸನ ಅರ ಮನೆಯ ಬಾಗಲ ಮುಂದಿರುವ ಪಟ್ಟಣದ ಬೀದಿ ಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೊರಟುಹೋದನು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 4

4ಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾ ರಕರೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು.

5ಆದರೆ ಅವನು ತಕ್ಕೊಳ್ಳಲಿಲ್ಲ. ಆಗ ಎಸ್ತೇರಳು ತನ್ನ ಬಳಿಯಲ್ಲಿ ಇರಿಸಲ್ಪಟ್ಟ ಅರಸನ ಮನೆವಾರ್ತೆಯವರಲ್ಲಿ ಹತಾಕ ನನ್ನು ಕರೆದು--ಇದೇನೆಂದೂ ಯಾತಕ್ಕೆಂದೂ ಮೊರ್ದೆ ಕೈಯಿಂದ ತಿಳಿದುಕೊಳ್ಳಬೇಕೆಂದು ಅವನಿಗೆ ಆಜ್ಞಾ ಪಿಸಿದಳು.

6ಹಾಗೆಯೇ ಹತಾಕನು ಅರಸನ ಅರ ಮನೆಯ ಬಾಗಲ ಮುಂದಿರುವ ಪಟ್ಟಣದ ಬೀದಿ ಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೊರಟುಹೋದನು.

7ಆಗ ಮೊರ್ದೆಕೈ ತನಗೆ ಆದದ್ದನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡುವ ನಿಮಿತ್ತ ಅರಸನ ಬೊಕ್ಕಸಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣ ವನ್ನೂ ಅವನಿಗೆ ತಿಳಿಸಿದನು.

8ಯೆಹೂದ್ಯರನ್ನು ನಾಶ ಮಾಡಲು ಶೂಷನಿನಲ್ಲಿ ಕೊಡಲ್ಪಟ್ಟ ಆಜ್ಞಾಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರ ಳಿಗೆ ತೋರಿಸಿ ತಿಳಿಸುವದಕ್ಕೂ ಅವಳು ತನ್ನ ಜನ ಕ್ಕೋಸ್ಕರ ಅರಸನ ಮುಂದೆ ಬಿನ್ನಹಮಾಡಿ ಬೇಡಿ ಕೊಳ್ಳುವದಕ್ಕೂ ಅವನ ಬಳಿಗೆ ಹೋಗಬೇಕೆಂದು ಅವಳಿಗೆ ಆಜ್ಞಾಪಿಸಲು ಹೇಳಿದನು.

ಎಸ್ತೇರಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी