ಆದಿಕಾಂಡ 11:8

ಹೀಗೆ ಕರ್ತನು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆಗ ಅವರು ಪಟ್ಟಣ ಕಟ್ಟುವದನ್ನು ನಿಲ್ಲಿಸಿ ಬಿಟ್ಟರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 11

6ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು.

7ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು.

8ಹೀಗೆ ಕರ್ತನು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆಗ ಅವರು ಪಟ್ಟಣ ಕಟ್ಟುವದನ್ನು ನಿಲ್ಲಿಸಿ ಬಿಟ್ಟರು.

9ಆದದರಿಂದ ಅದಕ್ಕೆ ಬಾಬೆಲ್‌ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.

10ಶೇಮನ ವಂಶಾವಳಿಗಳು ಇವೇ; ಶೇಮನು ನೂರು ವರುಷದವನಾಗಿದ್ದಾಗ ಅಂದರೆ ಪ್ರಳಯವಾಗಿ ಎರಡು ವರುಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು.

ಆದಿಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी