ಪ್ರಕಟನೆ 3:4

ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 3

2ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.

3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.

4ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.

5ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.

6ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

ಪ್ರಕಟನೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी