ನ್ಯಾಯಸ್ಥಾಪಕರು 4:19

ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 4

17ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.

18ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.

19ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು.

20ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು.

21ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.

ನ್ಯಾಯಸ್ಥಾಪಕರು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी