ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
8ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
9ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
10ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
11ಐಗುಪ್ತದ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದಿಂದ ಕಳುಹಿಸುವ ಹಾಗೆ ನೀನು ಅವನ ಸಂಗಡ ಮಾತನಾಡು ಅಂದನು.
12ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ--ಇಗೋ, ಇಸ್ರಾಯೇಲ್ ಮಕ್ಕಳೇ ನನ್ನ ಮಾತನ್ನು ಕೇಳದಿರುವಲ್ಲಿ ತೊದಲು ನಾಲಿಗೆಯವನಾದ ನನ್ನ ಮಾತನ್ನು ಫರೋಹನು ಕೇಳುವದು ಹೇಗೆ ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ