ಮತ್ತಾಯನು 12:47

ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 12

45ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.

46ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.

47ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.

48ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--

49ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!

ಮತ್ತಾಯನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी