ಅದಕ್ಕವರು ಯೆಹೋಶುವನಿಗೆ--ನಾವು ನಿನ್ನ ಸೇವ ಕರು ಅಂದರು. ಆಗ ಯೆಹೋಶುವನು ಅವರಿಗೆ-- ನೀವು ಯಾರು, ಎಲ್ಲಿಂದ ಬಂದಿರಿ ಅಂದನು.
6ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.
7ಆಗ ಇಸ್ರಾಯೇಲ್ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು.
8ಅದಕ್ಕವರು ಯೆಹೋಶುವನಿಗೆ--ನಾವು ನಿನ್ನ ಸೇವ ಕರು ಅಂದರು. ಆಗ ಯೆಹೋಶುವನು ಅವರಿಗೆ-- ನೀವು ಯಾರು, ಎಲ್ಲಿಂದ ಬಂದಿರಿ ಅಂದನು.
9ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ
10ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ