೨ ಅರಸುಗಳು 18:18

ಆದರೆ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾ ಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ಅವರ ಬಳಿಗೆ ಬಂದರು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 18

16ಆ ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು.

17ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.

18ಆದರೆ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾ ಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ಅವರ ಬಳಿಗೆ ಬಂದರು.

19ಆಗ ರಬ್ಷಾಕೆಯು ಅವರಿಗೆ--ನೀವು ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ, ಮಹಾ ಅರಸನಾದ ಅಶ್ಶೂರಿನ ಅರಸನು ಹೇಳುವದೇನಂದರೆ, ಭರವಸವಾಗಿರುವ ಈ ನಂಬಿಕೆಯೇನು?

20ಯುದ್ಧ ಕ್ಕಾಗಿ ಯೋಚನೆಯೂ ಪರಾಕ್ರಮವೂ ಉಂಟೆಂದು ನೀನು ಹೇಳುತ್ತೀ. ಆದರೆ ಅವು ವ್ಯರ್ಥವಾದ ಮಾತು ಗಳು.

೨ ಅರಸುಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी