ಯೋವೇಲ 3:10

ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ.

ಸಂದರ್ಭದೊಂದಿಗೆ ಓದಿ · ಯೋವೇಲ 3

8ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.

9ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ.

10ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ.

11ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.

12ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.

ಯೋವೇಲ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी