ಲೂಕನು 5:23

ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?

ಸಂದರ್ಭದೊಂದಿಗೆ ಓದಿ · ಲೂಕನು 5

21ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.

22ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?

23ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?

24ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.

25ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು.

ಲೂಕನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी