ಎಜ್ರನು 6:12

ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.

ಸಂದರ್ಭದೊಂದಿಗೆ ಓದಿ · ಎಜ್ರನು 6

10ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.

11ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.

12ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.

13ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.

14ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್‌ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.

ಎಜ್ರನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी