ಆದಿಕಾಂಡ 21:17

ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.

ಸಂದರ್ಭದೊಂದಿಗೆ ಓದಿ · ಆದಿಕಾಂಡ 21

15ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ

16ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.

17ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.

18ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.

19ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.

ಆದಿಕಾಂಡ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी