ಯೆರೆಮಿಯ 32:17

ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 32

15ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು --ಈ ದೇಶದಲ್ಲಿ ತಿರುಗಿ ಮನೆಗಳೂ ಹೊಲಗಳೂ ದ್ರಾಕ್ಷೇ ತೋಟಗಳೂ ಸ್ವಾಧೀನವಾಗುವವೆಂದು ಹೇಳುತ್ತಾನೆ.

16ನಾನು ಆ ಕ್ರಯಪತ್ರವನ್ನು ನೇರೀಯನ ಮಗ ನಾದ ಬಾರೂಕನಿಗೆ ಕೊಟ್ಟ ಮೇಲೆ ಕರ್ತನಿಗೆ ಹೀಗೆ ಪ್ರಾರ್ಥನೆ ಮಾಡಿದೆನು--

17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.

18ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.

19ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.

ಯೆರೆಮಿಯ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी