ಯೆಹೋಶುವ 13:31

ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್‌, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 13

29ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು.

30ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.

31ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್‌, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.

32ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.

33ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್‌ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.

ಯೆಹೋಶುವ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी