ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು.
23ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
24ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
25ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು.
26ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
27ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ