ಆಮೋಸ 7:6

ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಆಮೋಸ 7

4ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.

5ಆಗ ನಾನು--ಓ ದೇವರಾದ ಕರ್ತನೇ, ನಿಲ್ಲಿಸಿಬಿಡು ಎಂದು ಬೇಡಿಕೊಳ್ಳುತ್ತೇನೆ; ಯಾಕೋಬು ಯಾರಿಂದ ಎಬ್ಬಿಸ ಲ್ಪಟ್ಟಿತು? ಅದು ಚಿಕ್ಕ ಜನಾಂಗ ಎಂದು ಹೇಳಿದನು.

6ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.

7ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು.

8ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ.

ಆಮೋಸ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी