೧ ಅರಸುಗಳು 10:7

ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 10

5ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--

6ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು.

7ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.

8ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.

9ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.

೧ ಅರಸುಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी