ಅವನು ಅದರ ಎಲ್ಲಾ ಕೊಬ್ಬನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
17ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು.
18ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
19ಅವನು ಅದರ ಎಲ್ಲಾ ಕೊಬ್ಬನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
20ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
21ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ