ಆಮೋಸ 9:9

ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.

ಸಂದರ್ಭದೊಂದಿಗೆ ಓದಿ · ಆಮೋಸ 9

7ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.

8ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.

9ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.

10ಕೇಡು ನಮ್ಮನ್ನು ಹಿಂದಟ್ಟದು, ನಮ್ಮನ್ನು ತಡೆಯುವದಿಲ್ಲ ಎನ್ನುವ ನನ್ನ ಜನರಲ್ಲಿರುವ ಪಾಪಿಷ್ಠರು ಕತ್ತಿಯಿಂದ ಸಾಯುವರು.

11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

ಆಮೋಸ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी