ಜನರೆಲ್ಲರೂ ದಾಟಿದ ಮೇಲೆ ಕರ್ತನ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.
9ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.
10ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.
11ಜನರೆಲ್ಲರೂ ದಾಟಿದ ಮೇಲೆ ಕರ್ತನ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.
12ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ ಮಕ್ಕಳ ಮುಂದೆ ಹಾದುಹೋದರು.
13ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಕರ್ತನ ಎದುರಿನಲ್ಲಿ ಯುದ್ಧ ಮಾಡುವದಕ್ಕೆ ಯೆರಿಕೋವಿನ ಬೈಲುಗಳಿಗೆ ಹಾದು ಹೋದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ