ಯೆರೆಮಿಯ 7:26

ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 7

24ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.

25ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.

26ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.

27ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ.

28ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.

ಯೆರೆಮಿಯ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी