ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆ ಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು.
3ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ
4ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.
5ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆ ಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು.
6ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ
7ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ