೧ ಕೊರಿಂಥದವರಿಗೆ 5:3

ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 5

1ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.

2ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ.

3ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ.

4ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ

5ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.

೧ ಕೊರಿಂಥದವರಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी