೨ ತಿಮೊಥೆಯನಿಗೆ 2:21

ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.

ಸಂದರ್ಭದೊಂದಿಗೆ ಓದಿ · ೨ ತಿಮೊಥೆಯನಿಗೆ 2

19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.

20ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.

21ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.

22ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.

23ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.

೨ ತಿಮೊಥೆಯನಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी