ಯೋಹಾನನು 9:18

ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.

ಸಂದರ್ಭದೊಂದಿಗೆ ಓದಿ · ಯೋಹಾನನು 9

16ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್‌ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ

17ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.

18ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.

19ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು.

20ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು.

ಯೋಹಾನನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी