ಯೆಹೆಜ್ಕೇಲನು 19:8

ಆಗ ಜನಾಂಗಗಳು ಸುತ್ತಲಿನ ಪ್ರಾಂತ್ಯಗಳೊಳಗಿಂದ ಕೂಡಿ ಬಂದು ಅದಕ್ಕೆ ವಿರೋಧವಾಗಿ ನಿಂತು ಅದರ ಮೇಲೆ ಬಲೆಯನ್ನೊಡ್ಡಿದರು. ಆಗ ಅದು ಅವರ ಹಳ್ಳದಲ್ಲಿ ಸಿಕ್ಕಿ ಬಿದ್ದಿತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 19

6ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.

7ಅವರ ಅರಮನೆಗಳನ್ನು ಹಾಳು ಮಾಡಿತು; ಅವರ ನಗರಗಳನ್ನೂ ನಾಶಮಾಡಿತು. ಅದರ ಗರ್ಜನೆಯ ಶಬ್ದದಿಂದಾಗಿ ದೇಶವೂ ಅದರ ಪರಿಪೂರ್ಣತೆಯೂ ಬೀಡಾಗಿದ್ದನ್ನು ಅದು ತಿಳಿದುಕೊಂಡಿತು.

8ಆಗ ಜನಾಂಗಗಳು ಸುತ್ತಲಿನ ಪ್ರಾಂತ್ಯಗಳೊಳಗಿಂದ ಕೂಡಿ ಬಂದು ಅದಕ್ಕೆ ವಿರೋಧವಾಗಿ ನಿಂತು ಅದರ ಮೇಲೆ ಬಲೆಯನ್ನೊಡ್ಡಿದರು. ಆಗ ಅದು ಅವರ ಹಳ್ಳದಲ್ಲಿ ಸಿಕ್ಕಿ ಬಿದ್ದಿತು.

9ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು.

10ನಿನ್ನ ತಾಯಿ ನಿನ್ನ ರಕ್ತದಲ್ಲಿ ನೀರಿನ ಬಳಿ ನೆಟ್ಟ ದ್ರಾಕ್ಷೆಯ ಗಿಡದ ಹಾಗೆ ಇದ್ದಾಳೆ; ಅದು ನೀರಾವರಿ ಯಿಂದಲೂ ಫಲವುಳ್ಳದ್ದಾಗಿಯೂ ತುಂಬಾ ಕೊಂಬೆ ಗಳುಳ್ಳದ್ದಾಗಿಯೂ ಇದೆ.

ಯೆಹೆಜ್ಕೇಲನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी