ಯೆರೆಮಿಯ 28:14

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 28

12ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--

13ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ.

14ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.

15ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.

16ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.

ಯೆರೆಮಿಯ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी