ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ;
18ಆ ಸಮಯದಲ್ಲಿ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ನಿಮಗೆ ಆಜ್ಞಾಪಿಸಿದೆನು.
19ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.
20ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ;
21ಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು.
22ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ