ವಿಮೋಚನಕಾಂಡ 13:8

ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 13

6ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು.

7ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು.

8ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ.

9ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.

10ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು.

ವಿಮೋಚನಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी