ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು.
32ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು.
33ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು.
34ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು.
35ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು.
36ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ