೧ ಅರಸುಗಳು 14:16

ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 14

14ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು.

15ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು.

16ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.

17ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು.

18ಇಸ್ರಾಯೇಲ್ಯರೆಲ್ಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಟ್ಟರು.

೧ ಅರಸುಗಳು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी