ಪರಮ ಗೀತ 4:4

ನಿನ್ನ ಕುತ್ತಿಗೆ ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲ್ಪಟ್ಟ ಬುರುಜಿನ ಹಾಗೆ ಇದೆ; ಅದರಲ್ಲಿ ಸಾವಿರ ಗುರಾಣಿಗಳು ತೂಗ ಹಾಕಿವೆ; ಅವುಗಳೆಲ್ಲಾ ಪರಾಕ್ರಮಶಾಲಿಗಳ ಡಾಲುಗಳು.

ಸಂದರ್ಭದೊಂದಿಗೆ ಓದಿ · ಪರಮ ಗೀತ 4

2ನಿನ್ನ ಹಲ್ಲುಗಳು ತೊಳೆಯಲ್ಪಟ್ಟು ಮೇಲಕ್ಕೆ ಬರುವ ಉಣ್ಣೆ ಕತ್ತರಿಸಿದ ಕುರಿಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆಯಾಗಿರದು.

3ನಿನ್ನ ತುಟಿಗಳು ಕೆಂಪು ದಾರದ ಹಾಗೆ ಅವೆ; ನಿನ್ನ ಮಾತು ರಮ್ಯವಾದದ್ದು; ನಿನ್ನ ಕೆನ್ನೆಯು ಮುಸುಕಿನೊಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಇದೆ.

4ನಿನ್ನ ಕುತ್ತಿಗೆ ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲ್ಪಟ್ಟ ಬುರುಜಿನ ಹಾಗೆ ಇದೆ; ಅದರಲ್ಲಿ ಸಾವಿರ ಗುರಾಣಿಗಳು ತೂಗ ಹಾಕಿವೆ; ಅವುಗಳೆಲ್ಲಾ ಪರಾಕ್ರಮಶಾಲಿಗಳ ಡಾಲುಗಳು.

5ನಿನ್ನ ಎರಡು ಸ್ತನಗಳು ತಾವರೆ ಹೂವುಗಳಲ್ಲಿ ಮೇಯುವ ಅವಳಿ ಜವಳಿಯಾದ ಎರಡು ಜಿಂಕೆಯ ಮರಿಗಳ ಹಾಗೆ ಅವೆ.

6ಉದಯವಾಗುವ ವರೆಗೂ ನೆರಳುಗಳು ಓಡಿಹೋಗುವ ವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.

ಪರಮ ಗೀತ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी