ಲೂಕನು 7:34

ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.

ಸಂದರ್ಭದೊಂದಿಗೆ ಓದಿ · ಲೂಕನು 7

32ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.

33ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ.

34ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.

35ಆದರೆ ಜ್ಞಾನವು ತನ್ನ ಎಲ್ಲಾ ಮಕ್ಕಳಿಂದ ನೀತಿ ನಿರ್ಣಯಪಡೆಯುವದು ಅಂದನು.

36ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು.

ಲೂಕನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी