ಯೆಶಾಯ 36:5

ಯುದ್ಧಕ್ಕೆ ಬೇಕಾದ ಆಲೋಚನೆಯೂ ಪರಾಕ್ರಮವೂ ನನಗೆ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿ ಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಿ?

ಸಂದರ್ಭದೊಂದಿಗೆ ಓದಿ · ಯೆಶಾಯ 36

3ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.

4ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?

5ಯುದ್ಧಕ್ಕೆ ಬೇಕಾದ ಆಲೋಚನೆಯೂ ಪರಾಕ್ರಮವೂ ನನಗೆ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿ ಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಿ?

6ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.

7ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?

ಯೆಶಾಯ 36 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी