ಅರಣ್ಯಕಾಂಡ 8:21

ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 8

19ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್‌ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್‌ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್‌ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್‌ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.

20ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್‌ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.

21ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.

22ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು.

23ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--

ಅರಣ್ಯಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी