ಧರ್ಮೋಪದೇಶಕಾಂಡ 32:12

ಕರ್ತನು ಒಬ್ಬನೇ ಅವನನ್ನು ನಡಿಸಿದನು. ಅನ್ಯ ದೇವರು ಒಬ್ಬನೂ ಅವನ ಸಂಗಡ ಇದ್ದಿಲ್ಲ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 32

10ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.

11ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ

12ಕರ್ತನು ಒಬ್ಬನೇ ಅವನನ್ನು ನಡಿಸಿದನು. ಅನ್ಯ ದೇವರು ಒಬ್ಬನೂ ಅವನ ಸಂಗಡ ಇದ್ದಿಲ್ಲ.

13ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.

14ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.

ಧರ್ಮೋಪದೇಶಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी