೧ ಸಮುವೇಲನು 24:13

ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 24

11ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.

12ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.

13ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.

14ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ?

15ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.

೧ ಸಮುವೇಲನು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी