ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.
8ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
9ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
10ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.
11ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ