ಯೆಹೋಶುವ 6:13

ಟಗ ರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡಿಯುವ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧರಾದ ಜನರು ಅವರ ಮುಂದೆ ಹೋದರು. ಆದರೆ ಯಾಜಕರು ತುತೂರಿಗಳನ್ನು ಊದುತ್ತಾ ಹೋಗುವಾಗ ಕರ್ತನ ಮಂಜೂಷದ ಹಿಂದೆ ಸೈನ್ಯದವರು ನಡೆದರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 6

11ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು.

12ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು.

13ಟಗ ರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡಿಯುವ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧರಾದ ಜನರು ಅವರ ಮುಂದೆ ಹೋದರು. ಆದರೆ ಯಾಜಕರು ತುತೂರಿಗಳನ್ನು ಊದುತ್ತಾ ಹೋಗುವಾಗ ಕರ್ತನ ಮಂಜೂಷದ ಹಿಂದೆ ಸೈನ್ಯದವರು ನಡೆದರು.

14ಹೀಗೆ ಎರಡನೆ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿ ಬಂದು ಪಾಳೆಯಕ್ಕೆ ಹಿಂತಿರುಗಿದರು. ಹೀಗೆಯೇ ಆರು ದಿವಸ ಮಾಡಿದರು.

15ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು.

ಯೆಹೋಶುವ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी