ಮತ್ತಾಯನು 17:3

ಇಗೋ, ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಆತನ ಕೂಡ ಮಾತನಾಡು ತ್ತಿದ್ದರು.

ಸಂದರ್ಭದೊಂದಿಗೆ ಓದಿ · ಮತ್ತಾಯನು 17

1ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.

2ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.

3ಇಗೋ, ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಆತನ ಕೂಡ ಮಾತನಾಡು ತ್ತಿದ್ದರು.

4ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು.

5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.

ಮತ್ತಾಯನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी