ಅರಣ್ಯಕಾಂಡ 23:4

ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 23

2ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು.

3ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.

4ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು.

5ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು.

6ಆಗ ಅವನು ಬಾಲಾಕನ ಬಳಿಗೆ ತಿರಿಗಿ ಬಂದನು; ಅಗೋ, ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು.

ಅರಣ್ಯಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी