ಯೆಹೋಶುವ 15:10

ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್‌ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್‌ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್‌ಷೆ ಮೆಷಿಗೆ ಇಳಿದು ತಿಮ್ನಾಗೆ

ಸಂದರ್ಭದೊಂದಿಗೆ ಓದಿ · ಯೆಹೋಶುವ 15

8ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್‌ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ

9ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್‌ ಆದ ಬಾಲಾಕ್ಕೂ

10ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್‌ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್‌ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್‌ಷೆ ಮೆಷಿಗೆ ಇಳಿದು ತಿಮ್ನಾಗೆ

11ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು.

12ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.

ಯೆಹೋಶುವ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी