ಧರ್ಮೋಪದೇಶಕಾಂಡ 5:12

ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್‌ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 5

10ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ.

11ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ.

12ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್‌ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.

13ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.

14ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್‌ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.

ಧರ್ಮೋಪದೇಶಕಾಂಡ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी