ಲೂಕನು 5:36

ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.

ಸಂದರ್ಭದೊಂದಿಗೆ ಓದಿ · ಲೂಕನು 5

34ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ?

35ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು.

36ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.

37ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.

38ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.

ಲೂಕನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी