ಚೆಫನ್ಯ 1:13

ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.

ಸಂದರ್ಭದೊಂದಿಗೆ ಓದಿ · ಚೆಫನ್ಯ 1

11ಮಕ್ತೇಷಿನ ನಿವಾಸಿ ಗಳೇ, ಗೋಳಾಡಿರಿ; ವರ್ತಕರ ಜನರೆಲ್ಲಾ ಸಂಹಾರ ವಾದರು; ಬೆಳ್ಳಿ ಹೊತ್ತವರೆಲ್ಲರೂ ಕಡಿದುಬಿಡಲ್ಪಟ್ಟಿ ದ್ದಾರೆ.

12ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.

13ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.

14ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.

15ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.

ಚೆಫನ್ಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी