ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
6ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
7ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
8ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ